ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ತಗ್ಗುತ್ತಿದೆ.
ಕಳೆದ 24 ಗಂಟೆಯಲ್ಲಿ 15,823 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,40,01,743ಕ್ಕೆ ಏರಿಕೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿ, ಕಳೆದ 24 ಗಂಟೆಯಲ್ಲಿ 226 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 451189 ಕ್ಕೆ ಏರಿಕೆಯಾಗಿದೆ.
207653 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 22844 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ 33342901 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 96,43,79,212 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.