ನವದೆಹಲಿ: ದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಲ್ಲಿ ಭಾರೀ ಇಳಿಕೆ ಕಂಡುಬಂದಿದೆ.
24 ಗಂಟೆಗಳ ಅವಧಿಯಲ್ಲಿ 16,051 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 206 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,02,131ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ.1.93ರಷ್ಟಿದೆ.