Sunday, 15th December 2024

ಕೋವಿಡ್‌ ಉಲ್ಬಣ: ಪ್ರಕರಣಗಳ ಸಂಖ್ಯೆ 1,701

ನವದೆಹಲಿ: ದೇಶದಲ್ಲಿ ಮತ್ತೆ ಮಹಾಮಾರಿ ಕೋವಿಡ್‌ ಉಲ್ಬಣಗೊಳ್ಳುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,701 ಕ್ಕೆ ಏರಿದ್ದು, ಐವರು ಸಾವನ್ನಪ್ಪಿದ್ದಾರೆ.

ಕೇರಳದಲ್ಲಿ ನಾಲ್ವರು ಸಾವನ್ನಪ್ಪಿದರೆ, ಉತ್ತರ ಪ್ರದೇಶದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಇಲ್ಲಿಯವರಗೆ 4.50 ಕೋಟಿ ತಲುಪಿದೆ.

ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4.46 ಕೋಟಿಗೆ (4,44,69,799) ಏರಿಕೆಯಾಗಿದೆ. ಕೋವಿಡ್ -19 ನಿಂದ 5,33,316 ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರಕರಣದ ಸಾವಿನ ಪ್ರಮಾಣವು ಶೇ.1.19 ರಷ್ಟಿದೆ.