Wednesday, 11th December 2024

173 ಕರೋನಾ ಸೋಂಕು ಪ್ರಕರಣ ಪತ್ತೆ

#corona
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 173 ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,670ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4.46 ಕೋಟಿ (4,46,78,822) ಗೆ ಏರಿಕೆಯಾಗಿದೆ ಮತ್ತು ಈವರೆಗೂ 5,30,707 ಮಂದಿ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿಯಿಂದ ತಿಳಿದುಬಂದಿದೆ. ದೇಶದಲ್ಲಿ ಇದುವರೆಗೆ 4,41,45,445 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೂ 220.10 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸ ಲಾಗಿದೆ.