Saturday, 27th July 2024

ನವದೆಹಲಿ ಏರ್‌ಪೋರ್ಟ್‌‌ಗೆ ಬಂದಿಳಿದ 18 ವಿದ್ಯಾರ್ಥಿಗಳು

ನವದೆಹಲಿ: ರಾಜ್ಯದ ಒಟ್ಟು 18 ವಿದ್ಯಾರ್ಥಿಗಳು ಉಕ್ರೇನ್‌ಗೆ ವ್ಯಾಸಂಗಕ್ಕೆ ತೆರಳಿದ್ದವರು ಭಾನುವಾರ ಬೆಳಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಯುದ್ಧಪೀಡಿತ ಉಕ್ರೇನ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದ್ದರಿಂದ ನೆರೆಯ ರೋಮೆನಿಯಾ ತಲುಪಿದ್ದ ಬಹುತೇಕ ವೈದ್ಯಕೀಯ ವಿದ್ಯಾರ್ಥಿ ಗಳು, ಕೇಂದ್ರ ಸರ್ಕಾರ ವ್ಯವಸ್ಥೆ ಮಾಡಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸತತ 10 ಗಂಟೆ‌ ಪ್ರಯಾಣ ಮಾಡಿ ಸುರಕ್ಷಿತವಾಗಿ ಬಂದಿಳಿದರು.

ಸಾಕ್ಷಿ ದಾಮನಕರ್, ಮಹಾಗಣಪತಿ ಬಿಳಿಮಗ್ಗದ, ಐಶ್ವರ್ಯಾ ಪಾಟೀಲ, ಚಂದ್ರಶೇಖರ, ಮಿಜ್ಬಾ‌ ನೂರ್, ಮುನಿಸ್ವಾಮಿ ಗೌಡ, ಜೈನಾ ಎರಂ, ಧನರಾಜ್, ರಾವತನಹಳ್ಳಿ ಸ್ವಾತಿ, ಬಿ.ಜ್ಞಾನಶ್ರೀ, ಎಂ.ಯಶವಂತ, ಗಣೇಶ್ವರ ಪ್ರಿಯಾ, ಕೆ.ಜೆ.‌ ದೀಪಿಕಾ ಅವರು ಮೊದಲ ವಿಮಾನದಲ್ಲಿ ಬಂದಿಳಿದಿದ್ದು, ಇನ್ನು ಐದು ಜನ ಎರಡನೇ ವಿಮಾನ ದಲ್ಲಿ ಬಂದಿದ್ದಾರೆ.

ಎಲ್ಲ ವಿದ್ಯಾರ್ಥಿಗಳನ್ನು ಸರ್ದಾರ್ ಪಟೇಲ್ ಮಾರ್ಗದಲ್ಲಿರುವ‌ ಕರ್ನಾಟಕ ಭವನಕ್ಕೆ ಕರೆ‌ ತಂದಿದ್ದು, ಬೆಂಗ ಳೂರಿಗೆ ಕಳುಹಿಸಲು ಎಲ್ಲ ವ್ಯವಸ್ಥೆ ಮಾಡುತ್ತಿದ್ದಾರೆ.

ಯುದ್ಧದ ಆತಂಕ, ಶೀತ ವಾತವರಣ, ದೂರದ ಪ್ರಯಾಣದಿಂದ ಬಳಲಿರುವ‌ ವಿದ್ಯಾರ್ಥಿಗಳು ಆರೋಗ್ಯವಾ ಗಿದ್ದು, ತಮ್ಮ ತಮ್ಮ ಊರುಗಳಿಗೆ ತಲುಪಲು ಅಗತ್ಯವಿರುವ ಮುಂದಿನ ಪ್ರಯಾಣಕ್ಕೆ ಅಣಿಯಾಗುತ್ತಿದ್ದಾರೆ.

ಭಾರತೀಯ ರಾಯಭಾರಿ ಕಚೇರಿಯ ಸಹಕಾರದೊಂದಿಗೆ ರೋಮೆನಿಯಾ ಗಡಿ ತಲುಪಿ ಅಲ್ಲಿಂದ ಮರಳಿದ್ದೇವೆ. ಕೇಂದ್ರ ಸರ್ಕಾರ ಕೈಗೊಂಡ ವ್ಯವಸ್ಥೆ ಯಿಂದಾಗಿ ಸುರಕ್ಷಿತವಾಗಿ ವಾಪಸಾಗಲು ಸಾಧ್ಯವಾಯಿತು ಎಂದು ವಿದ್ಯಾರ್ಥಿಗಳು ಹೇಳಿದರು.

ತಾಯ್ನಾಡಿಗೆ‌ ಮರಳಿರುವುದರಿಂದ ಭೀತಿ ದೂರವಾಗಿದೆ. ರಾಜ್ಯದ ಇನ್ನೂ ಸಾಕಷ್ಟು ಜನ ಇನ್ನೂ ಅಲ್ಲೇ ಇದ್ದು, ಆದಷ್ಟು ಬೇಗ ವಾಪಸಾಗಲಿದ್ದಾರೆ’ ಎಂದು ಅವರು ಹೇಳಿದರು.

ಕರ್ನಾಟಕ ಸರ್ಕಾರ ಈ ಎಲ್ಲ ವಿದ್ಯಾರ್ಥಿಗಳನ್ನು ವಾಪಸ್ ಬೆಂಗಳೂರಿಗೆ ಕರೆ ತರಲು ವ್ಯವಸ್ಥೆ ಮಾಡಿದ್ದು, ಮಧ್ಯಾಹ್ನ 2 ಗಂಟೆ ವಿಮಾನದ‌ ಮೂಲಕ ತೆರಳಲಿದ್ದಾರೆ ಎಂದು ಕರ್ನಾಟಕ ಭವನದ ಅಧಿಕಾರಿಗಳು ಹೇಳಿದರು.

error: Content is protected !!