Wednesday, 11th December 2024

18,346 ಜನರಲ್ಲಿ ಕರೊನಾ ಸೋಂಕು ಪತ್ತೆ

covid

ನವದೆಹಲಿ: ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 18,346 ಜನರಲ್ಲಿ ಸೋಂಕು ಪತ್ತೆಯಾಗಿ, ಕಳೆದ 209 ದಿನಗಳಲ್ಲೇ ಅತಿ ಕಡಿಮೆ ಸಂಖ್ಯೆಯ ಕೋವಿಡ್ ಪ್ರಕರಣವಾಗಿದೆ.

ಸಾವಿನ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಿ, ಕಳೆದ 24 ಗಂಟೆಯಲ್ಲಿ 263 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

2,52902 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 29639 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ 33150886 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 91,54,65,826 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.