Thursday, 12th December 2024

188 ಹೊಸ ಕರೋನಾ ಸೋಂಕು ಪತ್ತೆ

ವದೆಹಲಿ: ಭಾರತದಲ್ಲಿ 188 ಹೊಸ ಕರೋನ ವೈರಸ್ ಸೋಂಕುಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,468 ಕ್ಕೆ ಏರಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ ದಾಖಲಾಗಿದೆ.

ಸಾವಿನ ಸಂಖ್ಯೆ 5,30,696 ಆಗಿದೆ ಎಂದು ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ದತ್ತಾಂಶಗಳು ತಿಳಿಸಿವೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಪತ್ತೆಗಾಗಿ 1,34,995 ಪರೀಕ್ಷೆಗಳನ್ನು ನಡೆಸ ಲಾಗಿದೆ. ಸಚಿವಾಲಯದ ವೆಬ್ಸೈಟ್ ಪ್ರಕಾರ, ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ದೇಶದಲ್ಲಿ ಇದುವರೆಗೆ 220.07 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾ ಗಿದೆ.

ಭಾರತದ ಕೋವಿಡ್ -19 ಸಂಖ್ಯೆ ಆಗಸ್ಟ್ 7, 2020 ರಂದು 20 ಲಕ್ಷ, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ, ಸೆಪ್ಟೆಂಬರ್ 16 ರಂದು 50 ಲಕ್ಷ, ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ, ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿದೆ.

 
Read E-Paper click here