Thursday, 12th December 2024

ಗೋರಖ್‌ಪುರದಲ್ಲಿ 194 ಡೆಂಘೀ ಪ್ರಕರಣ ಪತ್ತೆ

ಗೋರಖ್‌ಪುರ (ಉತ್ತರ ಪ್ರದೇಶ) : ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ.

ಗೋರಖ್‌ಪುರದಲ್ಲಿ ಈ ವರ್ಷ ಇದುವರೆಗೆ 194 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಅಂಗದ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಆದರೆ, ಸೋಂಕಿತ ಈಡಿಸ್ ಸೊಳ್ಳೆಗಳ ಕಡಿತದಿಂದ ಹರಡುವ ಡೆಂಗ್ಯೂಗೆ ಇದುವರೆಗೆ ಯಾವುದೇ ಸಾವು ಸಂಭವಿಸಿಲ್ಲ ಎಂದಿದ್ದಾರೆ.

ಆರೋಗ್ಯ ಇಲಾಖೆ ತಂಡಗಳು ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ. ಶುದ್ಧ ನೀರಿ ನಲ್ಲಿ ಈಡಿಸ್ ಸೊಳ್ಳೆಗಳು ಹರಡುವುದರಿಂದ ಜನರು ತಮ್ಮ ಮನೆ ಮತ್ತು ಕೆಲಸದ ಸ್ಥಳ ಗಳಲ್ಲಿ ಮತ್ತು ಸುತ್ತಮುತ್ತ ನೀರು ಸಂಗ್ರಹವಾಗದಂತೆ ಆರೋಗ್ಯ ಇಲಾಖೆ ಜನರಿಗೆ ಮನವಿ ಮಾಡಿದೆ.