Saturday, 14th December 2024

1,957 ಹೊಸ ಪ್ರಕರಣಗಳು ದೃಢ

covid

ವದೆಹಲಿ: ದೇಶದಲ್ಲಿ ಕೋವಿಡ್-19 ದೃಢಪಟ್ಟ 1,957 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ. ಸದ್ಯ ದೇಶದಲ್ಲಿ 27,374 ಪ್ರಕರಣಗಳು ಸಕ್ರಿಯವಾಗಿವೆ. ಸೋಮವಾರ 28,079 ಪ್ರಕರಣಗಳು ಸಕ್ರಿಯವಾಗಿದ್ದವು.

ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,16,394ಕ್ಕೆ ತಲುಪಿದೆ. ಈ ಪೈಕಿ 4,40,60,198 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಹೊಸದಾಗಿ ವರದಿ ಯಾಗಿರುವ 8 ಸಾವು ಸೇರಿ ಒಟ್ಟು 5,28,822 ಮಂದಿ ಮೃತಪಟ್ಟಿ ದ್ದಾರೆ.

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.06 ರಷ್ಟಿದೆ. ಇಲಾಖೆಯ ಮಾಹಿತಿ ಪ್ರಕಾರ ಇದುವರೆಗೆ 219.04 ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 2020ರ ಆಗಸ್ಟ್‌ 7 ರಂದು 20 ಲಕ್ಷದ ಗಡಿ ದಾಟಿತ್ತು. ಅದೇ ವರ್ಷದ ಆಗಸ್ಟ್‌ 23ರಂದು 30 ಲಕ್ಷ, ಸೆಪ್ಟೆಂಬರ್‌ 5ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16ರಂದು 50 ಲಕ್ಷ ಪ್ರಕರಣಗಳು ವರದಿಯಾಗಿದ್ದವು. ನಂತರ ಸೆಪ್ಟೆಂಬರ್‌ 28, ಅಕ್ಟೋಬರ್‌ 11, ಅಕ್ಟೋಬರ್‌ 29 ಹಾಗೂ ನವೆಂಬರ್‌ 20ರಂದು ಕ್ರಮವಾಗಿ 60 ಲಕ್ಷ, 70 ಲಕ್ಷ, 80 ಲಕ್ಷ ಹಾಗೂ 90 ಲಕ್ಷ ಪ್ರಕರಣಗಳು ದಾಖಲಾಗಿದ್ದವು.

ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 2020ರ ಡಿಸೆಂಬರ್‌ 19ರಂದು ಒಂದು ಕೋಟಿ, 2021ರ ಮೇ 4 ರಂದು ಎರಡು ಕೋಟಿ ಹಾಗೂ ಜೂನ್‌ 23ರಂದು ಮೂರು ಕೋಟಿ ಗಡಿ ದಾಟಿತ್ತು. ಈ ಸಂಖ್ಯೆ ಇದೇ ವರ್ಷ (2022) ಜನವರಿ 25ರಂದು ನಾಲ್ಕು ಕೋಟಿಗಿಂತ ಹೆಚ್ಚಾಗಿತ್ತು.