Thursday, 12th December 2024

ತಗ್ಗಿದ ಕೋವಿಡ್ ಅಟ್ಟಹಾಸ: 19,740 ಜನರಲ್ಲಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ತಗ್ಗುತ್ತಿದ್ದು, ಕಳೆದ 24 ಗಂಟೆಯಲ್ಲಿ 19,740 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 248 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 450375 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,36,643 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 23070 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33248291 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

24 ಗಂಟೆಯಲ್ಲಿ 79,12,202 ಜನರಿಗೆ ಲಸಿಕೆ ನೀಡಲಾಗಿದ್ದು, ಈವರೆಗೆ ಒಟ್ಟು 93,99,15,323 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.