Thursday, 12th December 2024

ಕರೋನಾ ಇಳಿಕೆ: 1,994 ಹೊಸ ಪ್ರಕರಣ ಪತ್ತೆ

#covid
ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1,994 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,42,742ಕ್ಕೆ ಏರಿಕೆಯಾಗಿದೆ.
ಅಲ್ಲದೇ, ಕಳೆದ 24 ಗಂಟೆಗಳಲ್ಲಿ 4 ಸಾವು ಪತ್ತೆಯಾಗುವುದರೊಂದಿಗೆ ಕೋವಿಡ್ ನಿಂದ ಮೃತಪಟ್ಟಿರುವವೆ ಒಟ್ಟು ಸಂಖ್ಯೆ 5,28,961ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,432ಕ್ಕೆ ಇಳಿಕೆಯಾಗಿದೆ.
ಈ ನಡುವೆ ಕಳೆದ 2,601 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿ ಕೊಂಡವರ ಸಂಖ್ಯೆ 4,40,90,349ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 1,88,220 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 89,96,27,428 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,55,98,943 ಜನರಿಗೆ ಲಸಿಕೆ ನೀಡಲಾಗಿದೆ.