Thursday, 12th December 2024

ಕರೋನಾ ಮಹಾಸ್ಫೋಟ: 2.71 ಲಕ್ಷ ಹೊಸದಾಗಿ ಸೋಂಕು ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 2.71 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 314 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 486066 ಕ್ಕೆ ಏರಿಕೆಯಾಗಿದೆ. ಇನ್ನು 1550377 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 138331 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

66,21,395 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,56,76,15,454 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,65,404 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 7,743 ಒಮೈಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.