Friday, 13th December 2024

ಜೈಪುರ್ ಗೋಲ್ಡನ್ ಆಸ್ಪತ್ರೆ: ಆಮ್ಲಜನಕ ಕೊರತೆಯಿಂದ 20 ಮಂದಿ ಸೋಂಕಿತರ ಸಾವು

ನವದೆಹಲಿ : ದೆಹಲಿಯಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಆಮ್ಲಜನಕದ ವ್ಯತ್ಯಯದಿಂದ 20 ಮಂದಿ ಸೋಂಕಿತರು ಮೃತಪಟ್ಟ ಇನ್ನೊಂದು ಘಟನೆ ವರದಿಯಾಗಿದೆ.

ದೆಹಲಿಯ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಮ್ಲಜನಕ ಸಿಗದೆ 20 ರೋಗಿಗಳು ಮೃತಪಟ್ಟಿದ್ದು, ಆಮ್ಲಜನಕ ಮುಕ್ತಾಯ ಗೊಳ್ಳುವ ಹಂತದಲ್ಲಿದ್ದು, ಇನ್ನೂ 60 ರೋಗಿಗಳು ಅಪಾಯದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಗುರುವಾರ 25 ಮಂದಿ ಕೊರೊನಾ ಸೋಂಕಿತರು ಆಮ್ಲಜನಕ ಸಿಗದೇ ಮೃತಪಟ್ಟಿದ್ದರು. ದೆಹಲಿಯಲ್ಲಿ ಶುಕ್ರವಾರ ಒಂದೇ ದಿನ 24,331 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 348 ಕರೋನಾ ಸೋಂಕಿತರು ಮೃತಪಟ್ಟಿದ್ದಾರೆ.