Thursday, 12th December 2024

ಬೆಂಕಿ ಅವಗಢ: 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮ

ನವದೆಹಲಿ: ದೆಹಲಿಯ ಆಗ್ನೇಯ ಭಾಗದಲ್ಲಿ ಓಖ್ಲಾದ ಹರಿಕೇಶ್‌ ನಗರದ ಮೆಟ್ರೊ ನಿಲ್ದಾಣದ ಬಳಿ ಭಾನುವಾರ ಕಾರ್ಖಾನೆ ಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.

ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಕತ್ರಾನ್‌ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಕಾರ್ಖಾನೆ ಅಕ್ಕಪಕ್ಕದಲ್ಲಿದ್ದ ಗುಡಿಸಲುಗಳಿಗೆ ಬೆಂಕಿ ಆವರಿಸಿದೆ. ಪರಿಣಾಮ 20ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಹೋಗಿವೆ.

ಬೆಂಕಿ ನಂದಿಸಲು ಒಟ್ಟು 26 ಅಗ್ನಿಶಾಮಕ ವಾಹOನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.