Saturday, 7th September 2024

200 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 200 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 5 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ 530663 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ 3767 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44141017 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,19,98,82,753 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,17,735 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾ ಗಿದೆ.

error: Content is protected !!