ನವದೆಹಲಿ: ದೇಶದಾದ್ಯಂತ ಗುರುವಾರ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 2,000 ಕೋವಿಡ್ ಪ್ರಕರಣಗಳು ವರದಿ ಯಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 25,510ಕ್ಕೆ ಇಳಿಕೆಯಾಗಿದೆ. ಕಳೆದೊಂದು ದಿನದಲ್ಲಿ 2,579 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,40,82,064 ಮಂದಿ ಗುಣಮುಖರಾಗಿದ್ದಾರೆ.