Sunday, 10th November 2024

20,038 ಕೋವಿಡ್ 19 ಸೋಂಕು ಪ್ರಕರಣ ದೃಢ

covid

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 20,038 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 47 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,604ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,39,073ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 16,994 ಜನರು ಗುಣಮುಖ ರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಒಟ್ಟು 4,30,45,350 ಜನರು ಚೇತರಿಸಿಕೊಂಡಿದ್ದಾರೆ.

24ಗಂಟೆಯಲ್ಲಿ 2,997 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.48 ರಷ್ಟಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 199.47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.