ನವದೆಹಲಿ: ಭಾರತದಲ್ಲಿ ಕರೋನಾ ಸೋಂಕು ಏರಿಳಿಕೆ ಮುಂದುವರೆದಿದೆ. ಸೋಮವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,022 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 46 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,38,393ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,459ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,832ಕ್ಕೆ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 2,099 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,25,99,102ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,92,38,45,615 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.