Saturday, 14th December 2024

ಕರೋನಾ ಸೋಂಕು ವ್ಯಾಪಕ: 20,528 ಪ್ರಕರಣ ದೃಢ

ನವದೆಹಲಿ: ದೇಶಾದ್ಯಂತ ಕರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 20,528 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 49 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 525709 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 143449 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 17790 ಜನರು ಕೋವಿಡ್ ನಿಂದ ಗುಣಮುಖ ರಾಗಿದ್ದಾರೆ. ದೇಶದಲ್ಲಿ ಈವರೆಗೆ 43081441 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 1,99,98,89,097 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,92,569 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.