Sunday, 15th December 2024

20,557 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

#covid

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,557 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, 24 ಗಂಟೆಯಲ್ಲಿ 44 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 5,26,211ಕ್ಕೆ ಏರಿಕೆಯಾಗಿದೆ. ಇನ್ನು 1,46,323 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.47ರಷ್ಟು ಜನಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,32,86,787 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,03,21,82,347 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,96,783 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.