Saturday, 14th December 2024

2,060 ಹೊಸ ಕರೋನಾ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,060 ಹೊಸ ಕರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,30,888ಕ್ಕೆ ಏರಿಕೆಯಾಗಿದೆ.
ಇದೇ ವೇಳೆ 10ಕ್ಕೂ ಅಧಿಕ ಮಂದಿ ಮೃತಪಡುವ ಮೂಲಕ ಈವರೆಗೆ 5,28,905 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಸದ್ಯ 26,834 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06 ರಷ್ಟಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.75 ರಷ್ಟಿದೆ.
ಕೇರಳವೊಂದರಲ್ಲೇ 4 ಜನರು ಸಾವಿಗೀಡಾಗುವ ಮೂಲಕ 24 ಗಂಟೆಗಳ ಅವಧಿಯಲ್ಲಿ 10ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
ದೇಶದಲ್ಲಿ ಈವರೆಗೆ 4,40,75,149 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.