Friday, 13th December 2024

2,075 ಕೋವಿಡ್ ಪ್ರಕರಣ ಪತ್ತೆ

#corona

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,075 ಕೋವಿಡ್ ಪ್ರಕರಣ ವರದಿಯಾಗಿದೆ. 71 ಮಂದಿ ಮೃತಪಟ್ಟಿದ್ದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 27,802ಕ್ಕೆ ಇಳಿಕೆಯಾಗಿದೆ. ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಮೃತಪಟ್ಟಿರುವವರ ಸಂಖ್ಯೆ 5,16,352ಕ್ಕೆ ಏರಿಕೆಯಾಗಿದೆ.

ಕಳೆದ 24ಗಂಟೆಯಲ್ಲಿ 1,379 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.  ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ದೇಶಾದ್ಯಂತ ಈವರೆಗೆ 181.04 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.