ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,08,921 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 2,71,57,795 ಕ್ಕೆ ಏರಿಕೆಯಾಗಿದೆ. 4,157 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3,11,388 ಕ್ಕೆ ಏರಿಕಯಾಗಿದೆ.
2,95,955 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,43,50,816 ಸೋಂಕಿತರು ಗುಣಮುಖರಾಗಿದ್ದು, ಸದ್ಯ ದೇಶ ದಲ್ಲಿ 24,95,591 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.