ನವದೆಹಲಿ: ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ ಕೋವಿಡ್ ದೃಢಪಟ್ಟ 2,112 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಕೋವಿಡ್ ದೃಢಪಟ್ಟವರ ಒಟ್ಟು ಸಂಖ್ಯೆ 4,46,40,748ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,043ಕ್ಕೆ ಇಳಿದಿದೆ. 24 ಗಂಟೆ ಗಳಲ್ಲಿ ಕೇರಳದಲ್ಲಿ ಮೂವರು ಮತ್ತು ಪಶ್ಚಿಮ ಬಂಗಾಳದಲ್ಲಿ ಒಬ್ಬ ಸೋಂಕಿತ ಮೃತಪಟ್ಟಿದ್ದಾನೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,28,957ರಷ್ಟಾಗಿದೆ.