Sunday, 10th November 2024

ಕಮರಿಗೆ ಬಿದ್ದ ಬಸ್: 22 ಜನರ ಸಾವು

ಯಮುನೋತ್ರಿ: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಉತ್ತರಕಾಶಿ ಜಿಲ್ಲೆಯ ದಮ್ಟಾ ಬಳಿ ಕಮರಿಗೆ ಬಿದ್ದಿದೆ.  ಘಟನೆಯಲ್ಲಿ ಇಪ್ಪತ್ತೆರಡು ಜನರು ಮೃತ ಪಟ್ಟು, ಆರು ಜನರು ಗಾಯಗೊಂಡಿದ್ದಾರೆ ಎಂದು ಉತ್ತರಾಖಂಡ್ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಯಮುನೋತ್ರಿಗೆ 28 ​​ಯಾತ್ರಿಕ ರನ್ನು ಹೊತ್ತೊಯ್ಯುತ್ತಿತ್ತು. ಯಾತ್ರಿಕರು ಮಧ್ಯ ಪ್ರದೇಶದ ಪನ್ನಾ ಜಿಲ್ಲೆಗೆ ಸೇರಿದವರು. ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರುಹೇಲಾ ಸೇರಿ ದಂತೆ ಹಿರಿಯ ಅಧಿಕಾರಿ ಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. “ಸ್ಥಳದಲ್ಲಿ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ಯಮುನೋತ್ರಿ ಜೊತೆಗೆ ಬದರಿನಾಥ, ಕೇದಾರನಾಥ, ಗಂಗೋತ್ರಿಯ ಪುಣ್ಯಕ್ಷೇತ್ರಗಳನ್ನು ಸಾಮಾನ್ಯವಾಗಿ ಚಾರ್ ಧಾಮ್ ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ವಿಪತ್ತು ನಿರ್ವ ಹಣಾ ಪಡೆ (ಎನ್‌ಡಿಆರ್‌ಎಫ್) ತಂಡವು ಸ್ಥಳಕ್ಕೆ ಧಾವಿಸಿದೆ ಎಂದು ಗೃಹ ಸಚಿವ ನಿತ್ಯಾನಂದ ರೈ ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಇಬ್ಬರು ಪ್ರಯಾ ಣಿಕರು ಮತ್ತು ಬಸ್‌ನ ಚಾಲಕ ಮತ್ತು ಕಂಡಕ್ಟರ್‌ ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದರು.

ಪುರೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ದಮ್ಟಾದಿಂದ ಸುಮಾರು 4 ಕಿ.ಮೀ ದೂರದಲ್ಲಿ ಘಟನೆ ನಡೆದಿದೆ. ವಾಹನ ಕಮರಿಗೆ ಉರುಳಿ ಬಿದ್ದ ಪರಿಣಾಮ ನುಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.