Saturday, 14th December 2024

ಪ್ರಧಾನಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿಯವರ ಗುಜರಾತ್ ಪ್ರವಾಸ ಸಂದರ್ಭ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢಪಟ್ಟಿದೆ.

‘ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿವಿಧ ಜಿಲ್ಲೆಗಳಿಂದ 5,000ಕ್ಕೂ ಅಧಿಕ ಪೊಲೀಸರು ಹಾಗೂ ಮೀಸಲು ಪಡೆಯ (ಎಸ್‌ಆರ್‌ಪಿ) ಸಿಬ್ಬಂದಿಯನ್ನು ಇಲ್ಲಿಗೆ ನಿಯೋಜಿಸಲಾಗಿತ್ತು. ಈ ಪೈಕಿ 3,651 ಪೊಲೀಸರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸ ಲಾಗಿದ್ದು 23 ಮಂದಿಗೆ ಸೋಂಕು ತಗುಲಿರುವುದು ಖಾತರಿಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸೋಂಕಿತರನ್ನು ರಾಜಪಿಪ್ಲಾದಲ್ಲಿರುವ ಕೋವಿಡ್‌ ಆರೈಕೆ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಪ್ರಕಟಣೆ ತಿಳಿಸಿದೆ.