Saturday, 14th December 2024

ಜಹಾಂಗೀರ್ಪುರಿ ಹಿಂಸಾಚಾರ: 23 ಜನರ ಬಂಧನ

ನವದೆಹಲಿ: ಎಂಟು ಪೊಲೀಸರು ಹಾಗೂ ಓರ್ವ ನಾಗರಿಕ ಗಾಯಗೊಂಡಿರುವ ವಾಯುವ್ಯ ದಿಲ್ಲಿಯ ಜಹಾಂಗೀರ್ಪುರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಕ್ಕೆ ಸೇರಿರುವ 23 ಜನರನ್ನು ಬಂಧಿಸಲಾಗಿದೆ.

23 ಜನರನ್ನು ಬಂಧಿಸಲಾಗಿದೆ. ಅವರು ಎರಡೂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಯಾವುದೇ ವ್ಯಕ್ತಿಯ ವಿರುದ್ಧ ಸಮುದಾಯವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು ಎಂದು ದಿಲ್ಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನ ತಿಳಿಸಿದ್ದಾರೆ.

ನಾಲ್ಕು ವಿಧಿವಿಜ್ಞಾನ ತಂಡಗಳು ಇಂದು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿವೆ. ಸಿಸಿಟಿವಿ ದೃಶ್ಯಾವಳಿ ಹಾಗೂ ಡಿಜಿಟಲ್ ಮಾಧ್ಯಮಗಳನ್ನು ವಿಶ್ಲೇಷಣೆ ನಡೆಸಲಾಗುತ್ತಿದೆ ಎಂದು ಹೇಳಿದರು.