Saturday, 14th December 2024

2,38,018 ಹೊಸ ಕರೋನಾ ಪ್ರಕರಣಗಳು ಪತ್ತೆ

#corona

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,38,018 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 310 ಮಂದಿ ಮೃತಪಟ್ಟಿದ್ದಾ ರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾ ಲಯ ಮಂಗಳವಾರ ಮಾಹಿತಿ ನೀಡಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,76,18,271ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,36,628ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 1,57,421 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,53,94,882ಕ್ಕೆ ತಲುಪಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,57,20,41,825 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಭಾರತದಲ್ಲಿ ಕೋವಿಡ್-19 ಸೋಂಕು ಉಲ್ಬಣವಾಗುತ್ತಿರುವ ಹೊತ್ತಿನಲ್ಲೇ ಓಮೈಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 8,891 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ಒಟ್ಟಾರೆ ಓಮೈಕ್ರಾನ್ ಸೋಂಕಿತರ ಸಂಖ್ಯೆ 8,891ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿದೆ.