Wednesday, 11th December 2024

2,424 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

covid

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 2,424 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,814 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ 28,079 ಕೋವಿಡ್ ಸಕ್ರಿಯ ಪ್ರಕರಣ ಗಳಿದ್ದು, ಶೇ.98.75ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 4,40,57,544 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 2,18,99,72,644 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 91,458 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.