ನವದೆಹಲಿ: ಕರೋನಾ 3ನೇ ಅಲೆ ಭೀತಿ ನಡುವೆಯೇ ಶನಿವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 24,354 ಪ್ರಕರಣಗಳು ದೃಢಪಟ್ಟಿದ್ದು, 234 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಶನಿವಾರ ಒಟ್ಟು ಸೋಂಕಿತರ ಸಂಖ್ಯೆ 3,37,91,061ಕ್ಕೆ ತಲುಪಿದ್ದು, 4,48,573ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾ ಲಯ ಮಾಹಿತಿ ನೀಡಿದೆ.
ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಗಳ ಸಂಖ್ಯೆ 2,73,889ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 25,455 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,30,68,599ಕ್ಕೆ ತಲುಪಿದೆ. ಇಲ್ಲಿಯವರೆಗೂ ಒಟ್ಟಾರೆ 89,74,81,554 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.