Saturday, 14th December 2024

ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯ: 25 ಮಂದಿ ಕರೋನಾ ಸೋಂಕಿತರ ಸಾವು

ನವದೆಹಲಿ: ಆಮ್ಲಜನಕ ಪೂರೈಕೆಯಲ್ಲಿ ಉಂಟಾಗಿ, ಗಂಗಾರಾಮ್ ಆಸ್ಪತ್ರೆಯಲ್ಲಿ 25 ಮಂದಿ ಕರೋನಾ ಸೋಂಕಿತರು ಮೃತಪಟ್ಟು, 60 ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಆಸ್ಪತ್ರೆಯ ಐಸಿಯು ವಿಭಾಗಕ್ಕೆ ಸಂಪರ್ಕಿಸುವ ಆಮ್ಲಜನಕ ವ್ಯವಸ್ಥೆ ಸರಿಯಾ ಗಿಲ್ಲ ಮತ್ತು ನಿಗದಿತ ಪ್ರಮಾಣದಲ್ಲಿ ರೋಗಿಗಳಿಗೆ ಆಮ್ಲಜನಕ ಸಿಗದ ಕಾರಣ ಈ ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 500ಕ್ಕೂ ಹೆಚ್ಚು ಕರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು , ಐಸಿಯುನಲ್ಲಿ ದಾಖಲಾಗಿರುವವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹರಸಾಹಸ ಪಡಲಾಗುತ್ತಿದೆ ಮತ್ತು ಆಮ್ಲಜನಕದ ಕೊರತೆ ಮುಖ್ಯವಾಗಿ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

ದುರಂತವೆಂದರೆ 2 ಟನ್ ಆಮ್ಲಜನಕ ತುಂಬಿದ್ದ ಟ್ಯಾಂಕರ್ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಕೆಟ್ಟು ನಿಂತಿದ್ದರಿಂದ ನಿಗದಿತ ಸಮಯಕ್ಕೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.