Saturday, 14th December 2024

ತಿರುಪ್ಪೂರ್ ಜಿಲ್ಲೆಯ 25 ವಿದ್ಯಾರ್ಥಿಗಳಿಗೆ ಕರೋನಾ ಸೋಂಕು

ಚೆನೈ: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಖಾಸಗಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗುರುವಾರ ಕರೋನಾ ಸೋಂಕು ತಗುಲಿದೆ.

ಓಮಿಕ್ರಾನ್ ರೂಪಾಂತರದ ಉಪಸ್ಥಿತಿಯನ್ನು ಪತ್ತೆ ಹಚ್ಚಲು ಜೀನೋಮಿಕ್ ಸೀಕ್ವೆನ್ಸಿಂಗ್ಗಾಗಿ ಮಾದರಿಗಳನ್ನು ಕಳುಹಿಸಲಾಗಿದೆ ವರದಿ ತಿಳಿಸಿದೆ. ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಕುಟುಂಬ ಸದಸ್ಯರು ಸೇರಿದಂತೆ 300 ಜನರ ಮಾದರಿಗಳನ್ನು ಕೋವಿಡ್‌ಗಾಗಿ ಪರೀಕ್ಷಿಸ ಲಾಗುತ್ತದೆ.

ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರು ಮನೆಯಲ್ಲಿ ಪ್ರತ್ಯೇಕವಾಗಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಬ್ಲಾಕ್-ವಾರು ಮೇಲ್ವಿಚಾರಣೆಯನ್ನು ತಿರುಪ್ಪೂರ್ ಜಿಲ್ಲೆಯಾದ್ಯಂತ ತೀವ್ರಗೊಳಿಸಲಾಗಿದೆ.