Thursday, 19th September 2024

ಬುಕಾರೆಸ್ಟ್‌ನಿಂದ 250 ಭಾರತೀಯರ ಸ್ಥಳಾಂತರ

ನವದೆಹಲಿ: ಉಕ್ರೇನ್‌ನಿಂದ ಸ್ಥಳಾಂತರಿಸಲು 250 ಭಾರತೀಯರನ್ನು ಹೊತ್ತ ಎರಡನೇ ವಿಮಾನ ರೊಮೇನಿಯಾದ ಬುಕಾರೆಸ್ಟ್‌ನಿಂದ ಭಾನುವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು.

ಏರ್ ಇಂಡಿಯಾ ವಿಶೇಷ ವಿಮಾನ ಸೇವೆಯು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಆಪರೇಷನ್ ಗಂಗಾ’ ಅಡಿ ಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿ ಯಾಗಿ ಕರೆತಂದಿದೆ. ವಿಮಾನದಲ್ಲಿ 25 ಮಂದಿ ಕನ್ನಡಿಗರು ಇದ್ದಾರೆನ್ನಲಾಗಿದೆ. ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ವಿದೇಶಾಂಗ ವ್ಯವಹಾರ ಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು ಸುರಕ್ಷಿತವಾಗಿ ಸ್ಥಳಾಂತರಿಸಿದ ಭಾರತೀಯ ರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಎರಡನೇ ವಿಮಾನದಲ್ಲಿ ಉಕ್ರೇನ್‌ನಿಂದ ಹಿಂದಿರುಗಿದ ಭಾರತೀಯ ವಿದ್ಯಾರ್ಥಿಯೊಬ್ಬರು, ಕೀವ್‌ನ ಹಲವಾರು ಸ್ಥಳಗಳಲ್ಲಿ ಪರಿಸ್ಥಿತಿ ತುಂಬಾ ಕೆಟ್ಟದಾ ಗಿದೆ ಮತ್ತು ಅದರ ನಾಗರಿಕರು ತಮ್ಮ ದೇಶವನ್ನು ಉಳಿಸಲು ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡಿದ್ದಾರೆ ಎಂದು ಹೇಳಿದರು.ನಾನು ಉಳಿದುಕೊಂಡಿದ್ದ ಸ್ಥಳದಲ್ಲಿ ಸಂಗ್ರಹಣೆಯನ್ನು ಪ್ರಾರಂಭಿಸಲಾಯಿತು”ಎಂದು ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿ ಯೊಬ್ಬರು ಹೇಳಿದ್ದಾರೆ.

ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಕಲಿಯುತ್ತಿರುವ ಸುಮಾರು 15,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿ ಕೊಂಡಿದ್ದಾರೆ. ಇದಕ್ಕೂ ಮೊದಲು, ಶನಿವಾರ ಸಂಜೆ ರೊಮೇನಿಯಾದಿಂದ ಮೊದಲ ಏರ್ ಇಂಡಿಯಾ ವಿಮಾನದ ಮೂಲಕ 219 ಭಾರತೀಯರು ನವದೆಹಲಿಗೆ ಆಗಮಿಸಿದ್ದರು. ಕಳೆದ ಕೆಲವು ದಿನಗಳಲ್ಲಿ 4000 ಭಾರತೀಯ ಪ್ರಜೆಗಳು ಈಗಾಗಲೇ ಉಕ್ರೇನ್ ತೊರೆದಿದ್ದಾರೆ. ದೆಹಲಿಯ ಎಂಇಎ ನಿಯಂತ್ರಣ ಕೊಠಡಿಗೆ 980 ಕರೆಗಳು ಮತ್ತು 850 ಇಮೇಲ್‌ಗಳು ಬಂದಿವೆ ಎಂದು ಕೂಡಾ ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶ್ರಿಂಗ್ಲಾ ತಿಳಿಸಿದ್ದಾರೆ.