Sunday, 15th December 2024

2,529 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕುಸಿತ ಕಂಡಿದ್ದ ಕರೋನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 2,529 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ದೇಶದಲ್ಲಿ ಈವರೆಗೆ 5,28,745 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ 32,282 ಕೋವಿಡ್ ಸಕ್ರಿಯ ಪ್ರಕರಣ ಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,43,436 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 2,18,84,20,182 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,22,057 ಜನರಿಗೆ ಕೋವಿಡ್ ಟೆಸ್ಟ್ ಮಾಡ ಲಾಗಿದೆ.