Thursday, 12th December 2024

ಕರೋನಾ ಬ್ರೇಕಿಂಗ್‌: 25,166 ಜನರಲ್ಲಿ ಸೋಂಕು ಪತ್ತೆ, 437 ಮಂದಿ ಬಲಿ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,166 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿದ್ದು, 437 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 432079 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 369846 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 36830 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31448754 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ ಸೋಮವಾರ ದೇಶದಲ್ಲಿ 15,63,985 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 88,13,919 ಜನರಿಗೆ ಲಸಿಕೆ ನೀಡಲಾ ಗಿದೆ. ದೇಶದಲ್ಲಿ ಈವರೆಗೆ ಒಟ್ಟು 55,47,30,609 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.