Sunday, 15th December 2024

2 ಸಾವಿರದ 528 ಕೋವಿಡ್ ಪ್ರಕರಣಗಳು ಪತ್ತೆ

#corona

ನವದೆಹಲಿ: ಭಾರತದಲ್ಲಿ ಶುಕ್ರವಾರ ಬೆಳಿಗ್ಗೆ 24 ಗಂಟೆಗಳ ಅವಧಿಯಲ್ಲಿ ಕೇವಲ 2,528 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 149 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 4,30,04,005ಕ್ಕೆ ಏರಿಕೆಯಾಗಿ, ಮೃತರ ಸಂಖ್ಯೆ 5,16,281ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 29,181ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,997 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,58,543ಕ್ಕೆ ತಲುಪಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿ ಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,80,80,24,147 ಜನರಿಗೆ ಲಸಿಕೆ ನೀಡಲಾಗಿದೆ.