Saturday, 14th December 2024

ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ: 25,404 ಜನರಲ್ಲಿ ವೈರಸ್‌ ಪತ್ತೆ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 25,404 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3,32,89,579ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 339 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಮೃತಪಟ್ಟವರ ಸಂಖ್ಯೆ 443213 ಕ್ಕೆ ಏರಿಕೆ ಯಾಗಿದೆ.

ಇನ್ನು 362207 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37127 ಜನರು ಗುಣಮುಖರಾಗಿದ್ದಾರೆ. ಈವರೆಗೆ 32484159 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 75,22,38,324 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.