Friday, 13th December 2024

2,568 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕರೋನಾ ಸೊಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದೆ. ನಿನ್ನೆಗಿಂತ ಇಂದು ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 2,568 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

24 ಗಂಟೆಯಲ್ಲಿ 97 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,974 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 33,917 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4,722 ಜನರು ಕೋವಿಡ್ ನಿಂದ ಗುಣಮುಖರಾಗಿ ದ್ದಾರೆ. ದೇಶದಲ್ಲಿ ಈವರೆಗೆ 4,24,46,171 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಈವರೆಗೆ 1,80,40,28,891 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,01,773 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸ ಲಾಗಿದೆ.