Friday, 22nd November 2024

2,57,299 ಮಂದಿಗೆ ಸೋಂಕು ದೃಢ, 4,194 ಸೋಂಕಿತರ ಸಾವು

ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,57,299 ಮಂದಿಗೆ ಸೋಂಕು ದೃಢಪಟ್ಟಿದೆ.

ಈ ಮೂಲಕ ಸೋಂಕಿತರ ಸಂಖ್ಯೆ 2,62,89,290 ಕ್ಕೆ ಏರಿಕೆಯಾಗಿದೆ. 4,194 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.

3,57,630 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 29,23,400 ಸಕ್ರಿಯ ಪ್ರಕರಣಗಳಿವೆ.