Sunday, 13th October 2024

ಮುಂದುವರಿದ ಕರೋನಾ ಅಟ್ಟಹಾಸ: 2,59,591 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕರೋನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 2,59,591 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 4,209 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 30,27,925 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,27,12,735 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 3,57,295 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.