Saturday, 14th December 2024

26,115 ನೂತನ ಕೋವಿಡ್ ಪ್ರಕರಣ ಪತ್ತೆ

#corona

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 252 ಮಂದಿ ಮೃತಪಟ್ಟಿರುವು ದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೋವಿಡ್ ಸೋಂಕಿನಿಂದ 252 ಮಂದಿ ಮೃತಪಟ್ಟಿದ್ದಾರೆ. ದೇಶಾದ್ಯಂತ ಹಮ್ಮಿಕೊಂಡ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 81.85 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,09,575ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ 26,115 ಕೋವಿಡ್ ಪ್ರಕರಣ ವರದಿ ಯಾಗಿದೆ. ಕಳೆದ 24ಗಂಟೆಗಳಲ್ಲಿ 34,469 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ದೇಶಾದ್ಯಂತ ಒಟ್ಟು 3,27,49,574 ಮಂದಿ ಚೇತರಿಸಿಕೊಂಡಿದ್ದಾರೆ.