Sunday, 15th December 2024

2,64,202 ಜನರಲ್ಲಿ ಕೋವಿಡ್ ಸೋಂಕು ದೃಢ

#corona

ನವದೆಹಲಿ: ದೇಶದಲ್ಲಿ ಶುಕ್ರವಾರ ಬರೋಬ್ಬರಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಇದು ಕಳೆದ 236 ದಿನಗಳಲ್ಲೇ ಏಕದಿನದ ಅತ್ಯಧಿಕ ಸೋಂಕಾಗಿದೆ. ಒಂದೇ ದಿನದಲ್ಲಿ ಹೊಸ ಪ್ರಕರಣಗಳು ಶೇ.6.7ರಷ್ಟು ಏರಿಕೆಯಾಗಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 12,72,073ಕ್ಕೆ ಏರಿಕೆಯಾಗಿದ್ದು, ಇದು 217 ದಿನಗಳ ಗರಿಷ್ಠವಾಗಿದೆ. ಕಳೆದ 24 ಗಂಟೆಗಳಲ್ಲಿ 315 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,65,82,129ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,85,350ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,09,345 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,48,24,706ಕ್ಕೆ ತಲುಪಿದೆ.

 

ಭಾರತದಲ್ಲಿ ಒಂದೇ 18,86,935 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,73,11,627 ಮಂದಿಯನ್ನು ಪರೀಕ್ಷೆಗೊಳಪಡಿಸ ಲಾಗಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15.17 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.