Wednesday, 11th December 2024

268 ಹೊಸ ಕರೋನಾ ಪ್ರಕರಣ ಪತ್ತೆ

covid
ನವದೆಹಲಿ: ಭಾರತದಲ್ಲಿ ಕರೋನಾ ಇಳಿಕೆ ಪ್ರಕರಣ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 268 ಹೊಸ ಪ್ರಕರಣ ಪತ್ತೆ ಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,77,915ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,698ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗು ತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,552ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 182 ಮಂದಿ ಗುಣ ಮುಖರಾಗುವು ದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,43,665ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 2,36,919 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸ ಲಾಗಿದ್ದು, ಈ ವರೆಗೂ 91,03,65,101 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗೆ ಪ್ರಧಾನಿ ಮೋದಿ ಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.
ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,08,33,449 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Read E-Paper click here