Wednesday, 9th October 2024

ಕೋವಿಡ್ ಬ್ರೇಕಿಂಗ್: 26,964 ಹೊಸ ಪ್ರಕರಣಗಳು ಪತ್ತೆ

#corona

ನವದೆಹಲಿ : ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತವು 26, 964 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 383 ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಒಟ್ಟು ಕೇಸುಗಳ ಸಂಖ್ಯೆ 3, 36, 30, 534ಕ್ಕೆ ತಲುಪಿ, ಸಾವಿನ ಸಂಖ್ಯೆ 4 ,45,768ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 34167 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ3,27,83,741ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 82. 65 ಕೋಟಿ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದೆ.