ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 2,706 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದೆ. ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,31,55,749ಕ್ಕೆ ಏರಿಕೆಯಾಗಿದೆ.
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 17,698ಕ್ಕೆ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 25 ಮಂದಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಸಾವಿನ ಸಂಖ್ಯೆ 5,24,611ಕ್ಕೆ ಏರಿಕೆಯಾಗಿದೆ.
24 ಗಂಟೆಯಲ್ಲಿ 2,070 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,26,13,440ಕ್ಕೆ ತಲುಪಿದೆ. 24ಗಂಟೆಯಲ್ಲಿ 611 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.