Friday, 22nd November 2024

2,786 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,786 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 12 ಮಂದಿ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ 5,28,847 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ.

ದೇಶದಲ್ಲಿ 26,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,65,963 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 2,19,15,39,281 ಡೋಸ್ ಲಸಿಕೆ ಹಾಕಲಾಗಿದೆ.