Friday, 13th December 2024

2,827 ಹೊಸ ಕೋವಿಡ್-19 ಪ್ರಕರಣ ಪತ್ತೆ

covid

ನವದೆಹಲಿ: ಭಾರತದಲ್ಲಿ ಕಳೆದೊಂದು ದಿನದಲ್ಲಿ 2,827 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ.

ಸೋಂಕಿತ ಪ್ರಕರಣಗಳ ಸಂಖ್ಯೆ ಒಟ್ಟು 4,31,13,413 ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ದೇಶಾದ್ಯಂತ 24 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,24,181 ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶಾದ್ಯಂತ 19,067 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಒಟ್ಟು 4,25,70,165 ಜನರು ಚೇತರಿಸಿಕೊಂಡಿದ್ದಾರೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನಡಿ ಈವರೆಗೆ 1,90,83,96,788 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ.