Monday, 25th November 2024

ಕರೋನಾ ಬ್ರೇಕಿಂಗ್: 2,82,970 ಹೊಸ ಪ್ರಕರಣ ಪತ್ತೆ

#corona

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,82,970 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 441 ಮಂದಿ ಮೃತಪಟ್ಟಿ ದ್ದಾರೆ.

ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,79,01,241ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,88,157 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,55,83,039ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,58,88,47,554 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

ಓಮೈಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 8,961 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ. ದೇಶಾದ್ಯಂತ ಇರುವ ಒಟ್ಟಾರೆ ಓಮಿಕ್ರಾನ್ ಸೋಂಕಿತರ ಸಂಖ್ಯೆ 8,961 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ದೇಶದ ಒಟ್ಟು 28 ರಾಜ್ಯಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿದೆ. ಹಾರಾಷ್ಟ್ರದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿದೆ ಎಂದು ತಿಳಿದುಬಂದಿದೆ.