Wednesday, 11th December 2024

ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ: 284 ಜನ ಮಹಾಮಾರಿಗೆ ಬಲಿ

#corona

ನವದೆಹಲಿ: ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 27,176 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ ಯಾಗಿ, ಸೋಂಕಿತರ ಸಂಖ್ಯೆ 3,33,16,755ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದ್ದು, 284 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಮೃತರ ಸಂಖ್ಯೆ 443497 ಕ್ಕೆ ಏರಿಕೆಯಾಗಿದೆ.

351087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 38012 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ 16,10,829 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 61,15,690 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 75,89,12,277 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.