Saturday, 23rd November 2024

2,876 ಕೋವಿಡ್ ಪ್ರಕರಣಗಳು ಪತ್ತೆ, 98 ಮಂದಿ ಸಾವು

#corona

ನವದೆಹಲಿ: ಭಾರತದಲ್ಲಿ ಕರೋನಾ 3ನೇ ಅಲೆ ಅಂತ್ಯದತ್ತ ಸಾಗಿದೆ. ಬುಧವಾರ ಬೆಳಿಗ್ಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 2,876 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 98 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,98,938ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,16,072ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ 32,811ಕ್ಕೆ ಇಳಿಕೆಯಾಗಿದೆ

ಕಳೆದ 24 ಗಂಟೆಗಳಲ್ಲಿ 3,884 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,50,055ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,80,60,93,107 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.